ದಾವಣಗೆರೆ: ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರ ಪೈಕಿ ಮೂವರ ಸ್ಥಿತಿ ಗಂಭೀರವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಭರಮಸಮುದ್ರ ಗ್ರಾಮದ ಕ್ರಾಸ್ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.
ಜಗಳೂರಿನಿಂದ ಭರಮಸಮುದ್ರ ಮಾರ್ಗವಾಗಿ ಕಲ್ಲೇದೇವರಪುರಕ್ಕೆ ಅಪ್ಪೆ ಆಟೋ ತೆರಳುತ್ತಿದ್ದಾಗ ಭರಮಸಮುದ್ರ ಕ್ರಾಸ್ ಬಳಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಹಾಗೂ ಆಟೋದಲ್ಲಿದ್ದ ಓರ್ವನ ಸ್ಥಿತಿ ಗಂಭೀರವಾಗಿದ್ದು, ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಸಾಗಿಸಲಾಯಿತು.