ದಾವಣಗೆರೆ:ತಾಲೂಕಿನ ರಾಂಪುರ ಗ್ರಾಮದ ಹದೆಗೆಟ್ಟ ರಸ್ತೆಗೆ ಕೊನೆಗೂ ಕಾಯಕಲ್ಪ ಸಿಕ್ಕಿದೆ.
ಜಿಲ್ಲೆಯ ಮಾಯಕೊಂಡ ಹೋಬಳಿಯ ರಾಂಪುರ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗೆ ಕೆಲವೇ ದಿನಗಳಲ್ಲಿ ಟಾರ್ ಕಾಣಲಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ರಾಂಪುರಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿತ್ತು. ಬಸ್ ಸಂಪರ್ಕ ಇಲ್ಲದೇ ಈ ಗ್ರಾಮದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು. ಅಷ್ಟೇ ಅಲ್ಲ, ಈ ಗ್ರಾಮದಲ್ಲಿ ಮೂಲ ಸೌಕರ್ಯ ಕೊರತೆಯ ಕಾರಣದಿಂದಾಗಿ ಹೆಣ್ಣುಮಕ್ಕಳು ಹೆಚ್ಚಿನ ವಿದ್ಯಾಭ್ಯಾಸವನ್ನೂ ಮಾಡಿಲ್ಲ. ಗ್ರಾಮಗಳಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ ಎಂದು ಜನರು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರಂತೆ. ಇಲ್ಲಿಂದ ಹೆಣ್ಣು ತರಲು ಕೂಡಾ ಜನ ಇಚ್ಚಿಸುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದರು.