ಬೆಂಗಳೂರು :ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಆಯ್ಕೆ ಬಹುತೇಕ ಖಚಿತವಾಗಿದೆ.
ಶಾಮನೂರು ಶಿವಶಂಕರಪ್ಪ ಸ್ಪರ್ಧೆಗೆ ಹಿಂದೇಟು ಹಾಕಿದ ಕಾರಣ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.ಶಾಮನೂರು ಹೊರತುಪಡಿಸಿದರೆ ಟಿಕೆಟ್ ಯಾರಿಗೆ ಅನ್ನೋ ಪ್ರಶ್ನೆ ಎದ್ದಿತ್ತು. ಹೀಗಾಗಿ ದಾವಣಗೆರೆ ಕ್ಷೇತ್ರ ಸಂಬಂಧ ಗೊಂದಲ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾಕಷ್ಟು ಹೆಸರುಗಳು ಕೇಳಿ ಬಂದಿತ್ತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜತೆ ಎಸ್.ಎಸ್. ಮಲ್ಲಿಕಾರ್ಜುನ್ ಈ ಸಂಬಂಧ ಎಸ್.ಎಸ್. ಮಲ್ಲಿಕಾರ್ಜುನ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ರನ್ನು ನಿವಾಸದಲ್ಲಿ ಭೇಟಿಯಾಗಿ, ಸಮಾಲೋಚನೆ ನಡೆಸಿದರು. ಬಳಿಕ ದಿನೇಶ್ ಗುಂಡೂರಾವ್ ಜೊತೆಗೂಡಿ ಎಸ್.ಎಸ್. ಮಲ್ಲಿಕಾರ್ಜುನ್ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜತೆ ಚರ್ಚೆ ನಡೆಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಈಗಾಗಲೇ ಮಾತುಕತೆ ನಡೆಸಿ, ಎಸ್.ಎಸ್. ಮಲ್ಲಿಕಾರ್ಜುನ್ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಇತ್ತ ತಂದೆ ಶಾಮನೂರು ಶಿವಶಂಕರಪ್ಪ ಕೂಡ ಪುತ್ರನನ್ನು ಕಣಕ್ಕಿಳಿಸುವ ಬಗ್ಗೆ ತಮ್ಮ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ದಾವಣಗೆರೆಗೆ ಕೈ ಅಭ್ಯರ್ಥಿ ಯಾರು ಅನ್ನೋ ಉಹಾಪೋಹಗಳಿಗೆ ಬ್ರೇಕ್ ಬಿದ್ದಂತಾಗಿದೆ.