ದಾವಣಗೆರೆ: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸುತ್ತಿದ್ದ ಐದು ಜನರನ್ನು ಪೊಲೀಸರು ಬಂಧಿಸಿ, ಮೂರು ಹಾವುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಣ್ಣುಮುಕ್ಕ ಹಾವುಗಳನ್ನು ಚೀಲದಲ್ಲಿ ಹಾಕಿಕೊಂಡು ದಾವಣಗೆರೆ ನಗರದ ಪಿ.ಜೆ. ಬಡಾವಣೆಯಲ್ಲಿರುವ ವಿಶ್ವೇಶ್ವರಯ್ಯ ಪಾರ್ಕಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ, ಐದು ಜನರನ್ನು ಬಂಧಿಸಿ ಹಾವುಗಳನ್ನು ವಶಕ್ಕೆ ಪಡೆದಿದ್ದಾರೆ.