ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ ಸರಣಿ ಅಪಘಾತ: ಓರ್ವ ಸಾವು, 9 ಮಂದಿಗೆ ಗಾಯ - ರಾಷ್ಟ್ರೀಯ ಹೆದ್ದಾರಿ 48

ನಿನ್ನೆ ರಾತ್ರಿ ಟಾಟಾ ಎಸ್, ಕಾರು, ಮಿನಿ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡರು. ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ.

road accident in davangere
ದಾವಣಗೆರೆಯಲ್ಲಿ ಸರಣಿ ಅಪಘಾತ

By

Published : Nov 30, 2022, 6:58 AM IST

Updated : Nov 30, 2022, 1:02 PM IST

ದಾವಣಗೆರೆ: ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು, ಮಿನಿ ಬಸ್, ಟಾಟಾ ಎಸ್ ನಡುವೆ ಡಿಕ್ಕಿ ಉಂಟಾಗಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುತ್ತಾಲ ಗ್ರಾಮದ ಹನುಮಂತಪ್ಪ (58) ಮೃತರು. ಗಂಭೀರವಾಗಿ ಗಾಯಗೊಂಡ ಒಂಬತ್ತು ಜನರ ಪೈಕಿ, ಐವರ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದಾವಣಗೆರೆಯಲ್ಲಿ ಸರಣಿ ಅಪಘಾತ

ಇದನ್ನೂ ಓದಿ:ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ರೈತರು ರೇಷ್ಮೆ ಬೆಳೆ ಮಾರಾಟ ಟಾಟಾ ಎಸ್‌ ವಾಹನದಲ್ಲಿ ರಾಮನಗರಕ್ಕೆ ಹೊರಟಿದ್ದರು. ಮಾರ್ಗಮಧ್ಯೆ ಟಯರ್ ಬ್ಲಾಸ್ಟ್ ಆಗಿ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಬೆಂಗಳೂರು ಕಡೆಯಿಂದ ಬರುತ್ತಿದ್ದ ಮಿನಿ ಬಸ್ ಹಾಗೂ ಕಾರಿಗೂ ಗುದ್ದಿದೆ. ರೇಷ್ಮೆ ಗೂಡುಗಳು ರಸ್ತೆಯಲ್ಲೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Last Updated : Nov 30, 2022, 1:02 PM IST

ABOUT THE AUTHOR

...view details