ದಾವಣಗೆರೆ: ಬೆಣ್ಣೆನಗರಿಯಲ್ಲಿಂದು ಏಳು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 255ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿಂದು ಏಳು ಮಂದಿಗೆ ಕೊರೊನಾ ಪಾಸಿಟಿವ್ - Davanagere
ದಾವಣಗೆರೆಯಲ್ಲಿಂದು ಏಳು ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಮೂವರು ಪುರುಷರು, ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿದೆ.
ಕೊರೊನಾ
ಮೂವರು ಪುರುಷರು, ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿದೆ. ರೋಗಿ-8801 ಕಂಟೇನ್ಮೆಂಟ್ ಝೋನ್ನಲ್ಲಿದ್ದವರಿಗೆ ಕೊರೊನಾ ತಗುಲಿದ್ದು, ರೋಗಿ-7573 ಸೋಂಕಿತ ಮಹಿಳೆಯಿಂದ ಆರು ಜನರಿಗೆ ಹೆಮ್ಮಾರಿ ವಕ್ಕರಿಸಿದೆ.
ಇದುವರೆಗೆ ಒಟ್ಟು 220 ಮಂದಿ ಕೊರೊನಾ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಏಳು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.