ಕರ್ನಾಟಕ

karnataka

ETV Bharat / state

ದಾವಣಗೆರೆ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ.. ಶಿಕ್ಷಕನಿಗೆ ಧರ್ಮದೇಟು - ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ಸರ್ಕಾರಿ ಶಾಲೆಯ ಶಿಕ್ಷಕ ಲೋಕೇಶ್ ಹೊದಿಗೆರೆ ಎಂಬುವರನ್ನು ಪೋಷಕರು ಥಳಿಸಿದ್ದಾರೆ.

Parents assault on teacher  at Davanagere
ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಧರ್ಮದೇಟು ಕೊಟ್ಟ ಜನ

By

Published : Oct 1, 2022, 11:10 AM IST

Updated : Oct 1, 2022, 1:00 PM IST

ದಾವಣಗೆರೆ:ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಶಿಕ್ಷಕನಿಗೆ ಪೋಷಕರು ಗೂಸಾ ಕೊಟ್ಟಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ತರಗತಿ ಮುಗಿದ ನಂತರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕ ಲೋಕೇಶ್ ಹೊದಿಗೆರೆ ಎಂಬುವರನ್ನು ಪೋಷಕರು ಥಳಿಸಿದ್ದಾರೆ. ಹಲವು ದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗ್ತಿದೆ. ಬಾಲಕಿಯು ಮನೆಗೆ ತೆರಳಿ ಕಾಮುಕ ಶಿಕ್ಷಕ ನೀಡುತ್ತಿದ್ದ ಕಿರುಕುಳವನ್ನು ಎಳೆ ಎಳೆಯಾಗಿ ಪೋಷಕರಿಗೆ ತಿಳಿಸಿದ್ದಾಳೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ.. ಶಿಕ್ಷಕನಿಗೆ ಧರ್ಮದೇಟು

ವಿಷಯ ತಿಳಿದ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚನ್ನಗಿರಿ ಬಿಇಒ ಮಂಜುನಾಥ್ ಭೇಟಿ ನೀಡಿ ಘಟನೆ‌ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಬಳಿಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಶಿಕ್ಷಕ ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ: ಶಿರಸಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನ ಬಂಧನ

Last Updated : Oct 1, 2022, 1:00 PM IST

ABOUT THE AUTHOR

...view details