ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಇಬ್ಬರು ಕಾಮುಕರು ಲೈಂಗಿಕ ಕಿರುಕುಳ ನೀಡಿ, ಆ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಅಪ್ರಾಪ್ತನಿಗೆ ಇಬ್ಬರು ಯುವಕರಿಂದ ಲೈಂಗಿಕ ಕಿರುಕುಳ - filed case against the culprits
ಅಪ್ರಾಪ್ತ ಬಾಲಕನಿಗೆ ಯುವಕರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದಲ್ಲಿ ನಡೆದಿದೆ.
ಬಾಲಕನ ಮೇಲೆ ಇಬ್ಬರು ಯುವಕರಿಂದ ಲೈಂಗಿಕ ಕಿರುಕುಳ
ಆರನೇ ತರಗತಿಯಲ್ಲಿ ಓದುತ್ತಿರುವ ಬಾಲಕನ ಮೇಲೆ ಯುವಕರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. 11 ವರ್ಷದ ಬಾಲಕನನ್ನು ಜಮೀನಿಗೆ ಕರೆದೊಯ್ದಿರುವ ಆರೋಪಿಗಳು ದೌರ್ಜನ್ಯ ನೀಡಿದ್ದಾರೆ.
ಘಟನೆಯ ಸಂಬಂಧ ವಿಡಿಯೋ ಪೋಷಕರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕುರಿತು ನ್ಯಾಮತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated : Feb 14, 2022, 11:23 AM IST