ದಾವಣಗೆರೆ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಅವರ ಪುತ್ರ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸ್ವಲ್ಪ ದಿನಗಳ ಕಾಲ ಬೆಂಗಳೂರಿನಲ್ಲಿಯೇ ಇದ್ದು ವಿಶ್ರಾಂತಿ ಪಡೆದು ಬಳಿಕ ದಾವಣಗೆರೆಗೆ ಬರಲಿದ್ದಾರೆ.
ಕೊರೊನಾ ಗೆದ್ದು ಬಂದ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್ - Shyamanuru shivashankarappa recovered from corona
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಅವರ ಪುತ್ರ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಏಳು ದಿನಗಳ ಹಿಂದೆ ಶಾಮನೂರು ಶಾಮನೂರು ಶಿವಶಂಕರಪ್ಪ ಅವರಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಬೆಂಗಳೂರಿನಲ್ಲಿದ್ದ ಕಾರಣ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 14ರ ಬೆಳಿಗ್ಗೆ ಅವರ ಸ್ವ್ಯಾಬ್ ಅನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ರಾತ್ರಿ 9 ಗಂಟೆಯ ಸುಮಾರಿಗೆ ವರದಿ ನೆಗೆಟಿವ್ ಎಂದು ಬಂದಿದೆ.
ಇನ್ನು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೂ ಸೋಂಕು ವಕ್ಕರಿಸಿರುವುದು ದೃಢಪಟ್ಟಿತ್ತು. ಸದ್ಯ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ. ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಹಾಗೂ ಪುತ್ರರಿಗೂ ಕೋವಿಡ್ ನೆಗೆಟಿವ್ ವರದಿ ಬಂದಿದೆ.