ಕರ್ನಾಟಕ

karnataka

ETV Bharat / state

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ: ಸುಟ್ಟು ಕರಕಲಾದ ಸಾಮಾಗ್ರಿಗಳು - short circuit in home at davanagere

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ. ಮನೆಗೆ ಬೆಂಕಿ ತಗುಲಿ, ಇಬ್ಬರಿಗೆ ಗಾಯ. ದಾವಣಗೆರೆಯ ವಿನಾಯಕ‌ ನಗರದಲ್ಲಿ ಘಟನೆ.

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

By

Published : Nov 15, 2019, 10:50 PM IST

ದಾವಣಗೆರೆ:ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿ, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆಯ ವಿನಾಯಕ‌ ನಗರದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

ಮಂಜಣ್ಣ ಎನ್ನುವವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮನೆಯಲ್ಲಿದ್ದ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ, ಬೆಂಕಿ ನಂದಿಸಲು ಹೋದ ಸಂದೀಪ್ ಮನೋಜ್ ಎನ್ನುವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅವಘಡ ತಪ್ಪಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details