ದಾವಣಗೆರೆ: ಇಂದಿನ ಯುವ ಪೀಳಿಗೆ ಡ್ರಗ್ಸ್ಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಆತಂಕ ವ್ಯಕ್ತಪಡಿಸಿದರು.
ನಟ-ನಟಿಯರಷ್ಟೇ ಅಲ್ಲ, ಡ್ರಗ್ಸ್ ಜಾಲದಲ್ಲಿ ಯುವ ಪೀಳಿಗೆಯೂ ಸಿಲುಕಿದೆ: ಸಚಿವ ಶ್ರೀರಾಮುಲು - ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ವಿಚಾರ
ಸ್ಯಾಂಡಲ್ವುಡ್ ನಟ-ನಟಿಯರು ಡ್ರಗ್ಸ್ ಸೇವಿಸುವುದರ ಜೊತೆಯಲ್ಲಿ ಇಂದಿನ ಯುವ ಪೀಳಿಗೆಯೂ ಕೂಡ ಡ್ರಗ್ಸ್ಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಯಾಂಡಲ್ವುಡ್ ನಟ-ನಟಿಯರು ಡ್ರಗ್ಸ್ ಸೇವಿಸುವುದರ ಜೊತೆಯಲ್ಲಿ ಇಂದಿನ ಯುವ ಪೀಳಿಗೆಯೂ ಕೂಡ ಡ್ರಗ್ಸ್ಗೆ ಒಳಗಾಗಿದ್ದಾರೆ. ನಮ್ಮ ಸರ್ಕಾರ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ ಎಂದು ಎಚ್ಚರಿಕೆ ರವಾನಿಸಿದರು.
ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನ್ಯಾ. ನಾಗಮೋಹನ್ ದಾಸ್ ವರದಿಯನ್ನು ಸಿಎಂ ಯಡಿಯೂರಪ್ಪ ಜಾರಿ ಮಾಡಲಿದ್ದಾರೆ. ವರದಿ ನೀಡಿ ಒಂದು ತಿಂಗಳು ಮಾತ್ರ ಆಗಿದೆ. ಅದರ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಸಿಎಂ ಬಳಿ ನಿಯೋಗ ಹೋಗಲಿದ್ದೇವೆ ಎಂದರು. ನಾಗಮೋಹನ್ ದಾಸ್ ವರದಿ ಸರ್ಕಾರದ ಮುಂದಿದೆ. ಕೋವಿಡ್ ಹಿನ್ನೆಲೆ ಅದನ್ನು ತಡೆಹಿಡಿಯಲಾಗಿದೆ. ಅದಷ್ಟು ಶೀಘ್ರದಲ್ಲಿ ಜಾರಿಗೊಳಿಸಲು ಇಲ್ಲಿ ಸಭೆ ನಡೆಸಲಾಗುತ್ತಿದ್ದು, ಇಂದು ಸಹ ಸಭೆಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.