ದಾವಣಗೆರೆ :ಪುತ್ರನಿಗೆ ಬಿಎಸ್ವೈ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟಿರುವುದು ಅವರ ಪಕ್ಷದ ವಿಚಾರ ನಮಗೇಕೆ. ಆದರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ. ಸುಳ್ಳು ಕೇಸ್ ಹಾಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಪುತ್ರನಿಗೆ ಬಿಎಸ್ವೈ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ವಿಚಾರ ನಮಗೇಕೆ: ಸಿದ್ದರಾಮಯ್ಯ ಪ್ರಶ್ನೆ - B Z Zameer Ahmed Khan
ಸುಳ್ಳು ಕೇಸ್ ಹಾಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಕಿರುಕುಳ ನೀಡುತ್ತಿದ್ದಾರೆ. ಅದಕ್ಕಾಗಿ ಕೇಂದ್ರದ ವಿರುದ್ಧ ನಮ್ಮ ಹೋರಾಟ ನಿರಂತರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ
ಬೇರೆಯವರಿಗೆ ಕ್ಷೇತ್ರ ಏಕೆ ಬಿಟ್ಟು ಕೊಡಲಿಲ್ಲ :ಬಿಜೆಪಿಯಲ್ಲಿ ಯಾರು ಕಾರ್ಯಕರ್ತರು ಇರಲಿಲ್ಲವೇ? ಮಗನಿಗೆ ಯಾಕೆ ಬಿಟ್ಟುಕೊಡಬೇಕು. ಬೇರೆಯವರಿಗೆ ಕ್ಷೇತ್ರ ಬಿಟ್ಟುಕೊಡಬಹುದಿತ್ತಲ್ಲವೇ? ಅಲ್ಲದೇ ಮಾಜಿ ಸಿಎಂ ಬಿಎಸ್ವೈ ಅವರನ್ನು ಕಾರ್ಯಕರ್ತರು ಸಿಎಂ ಮಾಡಿದ್ದಾರೆ. ಕಾರ್ಯಕರ್ತರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಡಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಟಾಂಗ್ ನೀಡಿದರು.
ಇದನ್ನೂ ಓದಿ :ಬಿಎಸ್ವೈ ವಿರುದ್ಧದ ಎಫ್ಐಆರ್ ಊರ್ಜಿತ ಪ್ರಕರಣ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ