ದಾವಣಗೆರೆ:ಸಿಎಂ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಬೆಳಗ್ಗೆಯಿಂದ ಸಂಜೆ ತನಕ ಟೀಕೆಗಳನ್ನು ಮಾಡುತ್ತಾರೆ. ಅವರ ಬಳಿ ಯಾವುದೇ ವಿಚಾರಗಳಿಲ್ಲ. ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಬಗ್ಗೆ ಖಾಲಿ ಪುಕ್ಕಟೆ ಮಾತನಾಡುತ್ತಾರೆ ಎಂದು ಹೇಳುವ ಮೂಲಕ ವೀಕ್ ಚೀಫ್ ಮಿನಿಸ್ಟರ್ ಬಗ್ಗೆ ಮಾತ್ರ ಬ್ಲಾಕ್‌ಮೇಲ್ ಮಾಡಲು ಸಾಧ್ಯ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಪಂಚಮಸಾಲಿ ಪೀಠದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕನಾಗಿ ಸರ್ಕಾರಕ್ಕೆ ಸಲಹೆ ಸೂಚನೆ ನೀಡುವ ಬದಲು ಪುಕ್ಕಟೆ ಟೀಕೆ ಟಿಪ್ಪಣಿಗಳನ್ನು ಮಾಡುವುದು ಅವಶ್ಯಕತೆ ಇಲ್ಲ ಎಂದರು.