ದಾವಣಗೆರೆ:ಜಿಲ್ಲೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಆರು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 289ಕ್ಕೇರಿದೆ.
ದಾವಣಗೆರೆಯಲ್ಲಿ ಆರು ಕೊರೊನಾ ಪಾಸಿಟಿವ್ ದೃಢ... ಸೋಂಕಿತರ ಸಂಖ್ಯೆ 289ಕ್ಕೇರಿಕೆ - Six Corona positives
ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ ಒಟ್ಟು 240 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 42 ಸಕ್ರಿಯ ಪ್ರಕರಣಗಳಿವೆ.
ಆರು ಮಂದಿಯ ಪೈಕಿ ಹರಿಹರದ ಆರೋಗ್ಯ ಇಲಾಖೆಯ ಕಾರ್ಯಕರ್ತೆಗೂ ಸೋಂಕು ತಗುಲಿದೆ. ಉಳಿದ ಐವರಿಗೆ ಹೇಗೆ ಸೋಂಕು ತಗುಲಿದೆ ಎಂಬ ಬಗ್ಗೆ ಶೋಧ ಮುಂದುವರಿದಿದೆ. ಹರಿಹರದಲ್ಲಿ ನಾಲ್ಕು, ಚನ್ನಗಿರಿ ಒಂದು ಹಾಗೂ ದಾವಣಗೆರೆಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ. ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು 240 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ 42 ಸಕ್ರಿಯ ಪ್ರಕರಣಗಳಿವೆ.