ದಾವಣಗೆರೆ :ಅಶೋಕ್ ಟಾಕೀಸ್ ಬಳಿಯ ರೈಲ್ವೆ ಗೇಟ್ ನಿರ್ಮಿಸಲು ಉದ್ದೇಶಿಸಲಾಗಿರುವ ರೈಲ್ವೆ ಅಂಡರ್ ಬ್ರಿಡ್ಜ್ಗೆ ಸಂಬಂಧಿಸಿದಂತೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಭೇಟಿ ನೀಡಿದರು.
ಕೇಂದ್ರ ಸಚಿವರ ಕಾಮಗಾರಿ ವೀಕ್ಷಣೆ ವೇಳೆ ಸಾಮಾಜಿಕ ಅಂತರವೇ ಮಾಯ..! - Duda President Rajanahalli Sivakumar
ಕೊರೊನಾ ವಿರುದ್ಧ ಜಾಗೃತಿ ಮೂಡಿಸಬೇಕಾಗಿದ್ದ ಜನಪ್ರತಿನಿಧಿಗಳೇ ಸಾಮಾಜಿಕ ಅಂತರ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಕಾಮಗಾರಿ ಸ್ಥಳ ವೀಕ್ಷಣಗೆ ಆಗಮಿಸಿದ್ದ ಸಚಿವರು, ಶಾಸಕರ ತಂಡ ಸಾಮಾಜಿಕ ಅಂತರವನ್ನೇ ಮರೆತಂತ್ತಿತ್ತು.
ಈ ವೇಳೆ ಸಚಿವರು ಸೇರಿ ಇತರೆ ಅಧಿಕಾರಿಗಳು ಸಾಮಾಜಿಕ ಅಂತರ ಉಲ್ಲಂಘಿಸಿರುವ ಘಟನೆ ನಡೆದಿದೆ. ಸಂಸದ ಜಿ ಎಂ ಸಿದ್ದೇಶ್ವರ್, ಶಾಸಕರು, ಡಿಸಿ ಮಹಾಂತೇಶ್ ಆರ್ ಬೀಳಗಿ, ಎಸ್ಪಿ ಹನುಮಂತರಾಯ, ರೈಲ್ವೆ ಇಲಾಖೆಯ ಅಧಿಕಾರಿಗಳು ಸೇರಿ ಇತರೆ ಇಲಾಖೆಯ ಅಧಿಕಾರಿಗಳು ಕೊರೊನಾ ಭೀತಿ ಇದ್ದರೂ ಅಂತರ ಕಾಯ್ದುಕೊಳ್ಳದೆ ಸೇರಿದ್ದು ಕಂಡು ಬಂತು.
ರೈಲ್ವೆ ನಿಲ್ದಾಣದ ಬಳಿ ನಡೆಯುತ್ತಿದ್ದ ಕಾಮಗಾರಿಗಳನ್ನು ವೀಕ್ಷಿಸಿದರು. ಮಾತ್ರವಲ್ಲ ಆದಷ್ಟು ಬೇಗ ಕೆಲಸ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ವೇಳೆ ಶಾಸಕರಾದ ಎಸ್.ಎ ರವೀಂದ್ರನಾಥ್, ಪ್ರೊ.ಲಿಂಗಣ್ಣ, ಎಸ್.ವಿ.ರಾಮಚಂದ್ರಪ್ಪ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹಾಗೂ ಇತರರು ಹಾಜರಿದ್ದರು.