ದಾವಣಗೆರೆ: ನಗರದಲ್ಲಿ ದುಗ್ಗಮ್ಮ ದೇವಿ ಜಾತ್ರೆ ಸಂಭ್ರಮ ಮನೆ ಮಾಡಿದ್ದು, ಆಚರಣೆಯಲ್ಲಿ ಪ್ರಾಣಿ ಬಲಿ ಕೊಡಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿತ್ತು. ಆದರೆ ನಿಯಮವನ್ನು ಗಾಳಿಗೆ ತೂರಿ ಕೆಲ ಯುವಕರು ಕೋಣವನ್ನು ಬಲಿ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪ್ರತಿವರ್ಷದಂತೆ ಈ ಬಾರಿಯೂ ದುಗ್ಗಮ್ಮ ದೇವಿ ಜಾತ್ರೆ ಆರಂಭವಾಗಿದೆ. ಈ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಕೋಣ ಬಲಿ ಕೊಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಆದರೆ ಜಿಲ್ಲಾಡಳಿತ ದೇಗುಲ 500 ಮೀಟರ್ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮಾಡಬಾದರು. ಬದಲಿಗೆ ಕೋಣದ ರಕ್ತವನ್ನು ಸಿರಿಂಜ್ನಲ್ಲಿ ತಗೆದು ಪೂಜೆ ಮಾಡಬೇಕೆಂದು ಭಕ್ತರಿಗೆ ತಿಳಿಸಿತ್ತು.