ದಾವಣಗೆರೆ:ಎನ್ಪಿಎಸ್ ಯೋಜನೆಯನ್ನು ರದ್ದುಪಡಿಸಲು ಒತ್ತಾಯಿಸಿ ರಾಷ್ಟ್ರವ್ಯಾಪಿಯಾಗಿ ಏಕಕಾಲದಲ್ಲಿ 'ರಕ್ತ ಕೊಟ್ಟೇವು ಪಿಂಚಣಿ ಬಿಡೆವು' ಹೋರಾಟ ನಡೆಯುತ್ತಿದ್ದು, ಇದೇ 7ರಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ ಶಿವಕುಮಾರ್ ತಿಳಿಸಿದ್ದಾರೆ.
ಎನ್ಪಿಎಸ್ ಯೋಜನೆ ರದ್ದತಿಗೆ ಆಗ್ರಹಿಸಿ, ದಾವಣಗೆರೆಯಲ್ಲಿ 'ರಕ್ತ ಕೊಟ್ಟೇವು ಪಿಂಚಣಿ ಬಿಡೆವು' ಹೋರಾಟ - ಎನ್ಪಿಎಸ್ ಯೋಜನೆ ರದ್ದತಿಗೆ ಆಗ್ರಹಿಸಿ ದಾವಣಗೆರೆಯಲ್ಲಿ ಹೋರಾಟ
ಎನ್ಪಿಎಸ್ ಯೋಜನೆಯನ್ನು ರದ್ದುಪಡಿಸಲು ಒತ್ತಾಯಿಸಿ ರಾಷ್ಟ್ರವ್ಯಾಪಿಯಾಗಿ ಏಕಕಾಲದಲ್ಲಿ 'ರಕ್ತ ಕೊಟ್ಟೇವು ಪಿಂಚಣಿ ಬಿಡೇವು' ಹೋರಾಟ ನಡೆಯುತ್ತಿದ್ದು, ಇದೇ 7ರಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.
ನೌಕರರ ಇಳಿವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ನೂತನ ಪಿಂಚಣಿ ಯೋಜನೆಯಡಿ ನೌಕರರಿಗೆ ಪಿಂಚಣಿ ನೀಡುವ ಉದ್ದೇಶಕ್ಕಾಗಿ, ನೌಕರನ ವೇತನದಿಂದ ಶೇ. 10% ರಷ್ಟನ್ನು ಕಡಿತಗೊಳಿಸಲಾಗುತ್ತಿದೆ ಎಂದರು. ಸದರಿ ಕಾಯ್ದೆಯಲ್ಲಿ ಯಾವುದೇ ಭದ್ರತೆ ನೀಡದೆಯೇ ಪಿಂಚಣಿ ಯೋಜನೆ ಘೋಷಿಸಲಾಗಿದೆ ಎಂದು ಆರೋಪಿಸಿದರು.
ನ್ಯಾಯಬದ್ದವಾಗಿ ಪಿಂಚಣಿ ಕೊಟ್ಟು, ನೌಕರರಲ್ಲಿ ತಾರತಮ್ಯ ಹೋಗಲಾಡಿಸಬೇಕು. ಪಿಂಚಣಿ ನಿಧಿಯನ್ನು ಭದ್ರಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ರಕ್ತದಾನ ಮಾಡುವುದಾಗಿ ಎಂದು ತಿಳಿಸಿದರು.