ದಾವಣಗೆರೆ: ಕೊರೊನಾ ಸೋಂಕು ಭೀತಿ ನಡುವೆಯೂ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, 93 ಪರೀಕ್ಷಾ ಕೇಂದ್ರಗಳಲ್ಲಿ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಕೊರೊನಾ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ: ದಾವಣಗೆರೆಯಲ್ಲಿ ಹೇಗಿದೆ ಪರಿಸ್ಥಿತಿ?
ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹಾಗೆಯೇ ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ
ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿ ಸ್ಯಾನಿಟೈಸರ್ ನೀಡಲಾಗುತ್ತಿದೆ. ಬಳಿಕ ಮಾಸ್ಕ್ ವಿತರಿಸಲಾಗುತ್ತಿದೆ. ಕಂಟೇನ್ಮೆಂಟ್ ಝೋನ್ಗಳಲ್ಲಿ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.