ಕರ್ನಾಟಕ

karnataka

ETV Bharat / state

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮ್ಯಾನೇಜರ್​ ಆತ್ಮಹತ್ಯೆ.. ಕಾರಣ ನಿಗೂಢ! - ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ..

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿವೋರ್ವ ನೇಣಿಗೆ ಶರಣಾಗಿದ್ದಾ‌ರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಿವಕುಮಾರ್ ಮೃತ ವ್ಯಕ್ತಿ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

office
ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ..

By

Published : Dec 21, 2020, 2:27 PM IST

Updated : Dec 21, 2020, 3:58 PM IST

ದಾವಣಗೆರೆ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಬ್ಬಂದಿವೋರ್ವ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಿವಕುಮಾರ್, ನಿನ್ನೆ (ಭಾನುವಾರ) ಯಾರೂ ಇಲ್ಲದಿರುವಾಗ ಕಚೇರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿರುವ ಶಿವಕುಮಾರ್, ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಇಂದು ಬೆಳಗ್ಗೆ ಸಿಬ್ಬಂದಿ ಕಚೇರಿ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮ್ಯಾನೇಜರ್​ ಆತ್ಮಹತ್ಯೆ

ಸ್ಥಳಕ್ಕೆ ಗಾಂಧಿನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮೃತದೇಹವನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರಿಗೆ ಕೆಲ ದಿನಗಳ ಹಿಂದೆ ಮ್ಯಾನೇಜರ್ ಆಗಿ ಬಡ್ತಿ ಸಿಕ್ಕಿತ್ತು.

ಮನೆಯಲ್ಲಾಗಲೀ, ಕಚೇರಿಯಲ್ಲಾಗಲೀ ಯಾವುದೇ ಸಮಸ್ಯೆ ಇರಲಿಲ್ಲ. ಕೆಲ ದಿನಗಳ ಹಿಂದೆ ಟ್ರೈನಿಂಗ್​​ಗೆ ಎಂದು ತೆರಳಿದ್ದಾಗ ಲಘು ಹೃದಯಾಘಾತ ಆಗಿ ಪ್ರಾಣಾಪಾಯದಿಂದ ಪಾರಾಗಿದ್ದರು ಎಂದು ಸಂಬಂಧಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

Last Updated : Dec 21, 2020, 3:58 PM IST

ABOUT THE AUTHOR

...view details