ಕರ್ನಾಟಕ

karnataka

ETV Bharat / state

ಆರ್​ಸಿಇಪಿ ಒಪ್ಪಂದ ವಿರೋಧಿಸಿ ಅ.31ಕ್ಕೆ ರಾಜ್ಯ ರೈತರ ಸೇನೆಯಿಂದ ಪ್ರತಿಭಟನೆ! - ಆರ್​ಸಿಇಪಿ ಒಪ್ಪಂದ ವಿರೋಧಿಸಿ ಅ.31ಕ್ಕೆ ರಾಜ್ಯ ರೈತರ ಸೇನೆಯಿಂದ ಪ್ರತಿಭಟನೆ

ಆರ್​ಸಿಇಪಿ ಒಪ್ಪಂದವು ಆಹಾರ ಮತ್ತು ಕೃಷಿಯ ಕ್ಷೇತ್ರಕ್ಕೆ ದೊಡ್ಡ ಬೆದರಿಕೆಯಾಗಿದೆ. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ದಾವಣಗೆರೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಆರ್​ಸಿಇಪಿ ಒಪ್ಪಂದ ವಿರೋಧಿಸಿ ಅ.31ಕ್ಕೆ ರಾಜ್ಯ ರೈತರ ಸೇನೆಯಿಂದ ಪ್ರತಿಭಟನೆ!

By

Published : Oct 26, 2019, 3:48 PM IST

ದಾವಣಗೆರೆ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಅಕ್ಟೋಬರ್ 31 ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಆರ್​ಸಿಇಪಿ ಒಪ್ಪಂದ ವಿರೋಧಿಸಿ ಅ.31ಕ್ಕೆ ರಾಜ್ಯ ರೈತರ ಸೇನೆಯಿಂದ ಪ್ರತಿಭಟನೆ!

ಒಂದು ವೇಳೆ ಈ ಒಪ್ಪಂದವಾದರೆ ರೈತರ ಬದುಕು ಬೀದಿಗೆ ಬರಲಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ಆತಂಕ ವ್ಯಕ್ತಪಡಿಸಿದರು. ಈ ಒಪ್ಪಂದದಿಂದ ವಿದೇಶಿ ಹೂಡಿಕೆದಾರರು ಕೃಷಿ ಭೂಮಿಯನ್ನು ಖರೀದಿಸಲು ಅನುಕೂಲವಾಗುತ್ತದೆ.

ಸೂಪರ್ ಮಾರ್ಕೆಟ್ ಮತ್ತು ದೊಡ್ಡ ಕಂಪನಿಗಳು ನೇರ ಚಿಲ್ಲರೆ ವ್ಯಾಪಾರದಲ್ಲಿ ಭಾಗವಹಿಸುವುದರಿಂದ ಸ್ಥಳೀಯ ಮಾರುಕಟ್ಟೆ ಹಾಗೂ ಸ್ಥಳೀಯ ವ್ಯಾಪಾರಸ್ಥರನ್ನು ಅಳಿಸಿ ಹಾಕಲಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆತಂಕ ವ್ಯಕ್ತಪಡಿಸಿದೆ.

ABOUT THE AUTHOR

...view details