ದಾವಣಗೆರೆ :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಪೂರೈಸಲಿದೆ. ಮಧ್ಯಂತರ ಚುನಾವಣೆ ಬರಲು ಸಾಧ್ಯವೇ ಇಲ್ಲ. ಕಾಂಗ್ರೆಸ್- ಜೆಡಿಎಸ್ನವರಿಗೆ ತಲೆ ಕೆಟ್ಟಿದೆ. ಹೀಗಾಗಿ, ಬೇಕಾಬಿಟ್ಟಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ 3 ವರ್ಷ ಅಧಿಕಾರವಧಿ ಪೂರೈಸಲಿದೆ.. ಎಂ ಪಿ ರೇಣುಕಾಚಾರ್ಯ ವಿಶ್ವಾಸ - ರಾಜ್ಯ ಸರ್ಕಾರ 3 ವರ್ಷ ಅಧಿಕಾರವಧಿ ಪೂರೈಸಲಿದೆ
ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ 3 ವರ್ಷ ಅಧಿಕಾರಾವಧಿ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೂರೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿರಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪಕ್ಷದ ಹಿರಿಯ ನಾಯಕರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಯತ್ನಾಳ್ ಮಾತನಾಡಿಲ್ಲ. ಹಾಗಾಗಿ, ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ. ಪಕ್ಷ ನೀಡಿದ ನೊಟೀಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ. ಜನರ ಮನಸ್ಸಿನಲ್ಲಿರುವ ಭಾವನೆಗಳನ್ನಷ್ಟೇ ಯತ್ನಾಳ್ ಹೇಳಿದ್ದಾರೆ ಎನ್ನುವ ಮೂಲಕ ಸಮರ್ಥಿಸಿಕೊಳ್ಳುವ ಪ್ರಯತ್ನವನ್ನು ರೇಣುಕಾಚಾರ್ಯ ಮಾಡಿದರು.
ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್-ಜೆಡಿಎಸ್ ಕೈಗೊಂಬೆಯಾಗಿ ಕೆಲಸ ಮಾಡಿ ಶಾಸಕರನ್ನು ಅನರ್ಹ ಮಾಡಿದರು. ಈ ಕ್ಷೇತ್ರಗಳಲ್ಲಿ ಶಾಸಕರಿಲ್ಲ. ಇಂಥ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿದರೆ ಏನು ತಪ್ಪು ಎಂದು ಪ್ರಶ್ನಿಸಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಾಜ್ಯದ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿದರು.