ದಾವಣಗೆರೆ : ಕಾಂಗ್ರೆಸ್ ಸರ್ಕಾರ ಒಂದು ಪೈಸೆಯನ್ನೂ ಕೂಡ ಬರ ಪರಿಹಾರ ಕೊಟ್ಟಿಲ್ಲ. ಬದಲಾಗಿ ಕೇಂದ್ರ ಸರ್ಕಾರದ ವಿರುದ್ದ ಬೊಟ್ಟು ಮಾಡಿ ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ ಪರಿಹಾರ ಕೊಡಿ ಎಂದರೆ ಕೇಂದ್ರ ಸರ್ಕಾರದ ತಂಡ ಬರಗಾಲದ ಪ್ರವಾಸ ಮಾಡಿಲ್ಲ, ಅವರು ಅಧ್ಯಯನ ಮಾಡಿ ವರದಿ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ಬಂದ ಮೇಲೆ ಪರಿಹಾರ ಬಿಡುಗಡೆ ಮಾಡ್ತೇವೆ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಇದ್ದಾಗ ಪ್ರವಾಹ ಬಂದಿತ್ತು. ಅ ಸಂದರ್ಭದಲ್ಲಿ 2 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೀವಿ. ಆದರೇ ಈ ಸರ್ಕಾರ ಒಂದು ಪೈಸೆಯನ್ನೂ ಕೂಡ ಬರ ಪರಿಹಾರ ಕೊಟ್ಟಿಲ್ಲ. ಈಗ ವಿದ್ಯುತ್ ಸಮಸ್ಯೆ ಬಗ್ಗೆ ಪ್ರತಿಭಟನೆ ಮಾಡಿದರೆ, ಕಲ್ಲಿದ್ದಲನ್ನು ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎಂದು ಹೇಳುತ್ತಾರೆ. ಕಲ್ಲಿದ್ದಲು ಪೂರೈಕೆಯಲ್ಲಿ ಯಾವುದೇ ಕೊರತೆ ಮಾಡಿಲ್ಲ ಎಂದು ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಮಳೆ ಕಡಿಮೆ ಆಗುತ್ತದೆ ಎಂದು ಹವಾಮಾನ ಇಲಾಖೆ ಹಲವಾರು ಬಾರಿ ಮುನ್ಸೂಚನೆ ನೀಡಿತ್ತು. ಆದರೂ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ವಹಿಸಿಲ್ಲ ಎಂದು ಕಿಡಿಕಾರಿದರು. ಪರಿಹಾರ ಕೊಡಲು ಸಾಧ್ಯವಾಗಲಿಲ್ಲ ಎಂದರೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಎಂದು ರವಿಕುಮಾರ್ ಇದೇ ವೇಳೆ ಒತ್ತಾಯಿಸಿದರು.
ಇನ್ನು’’ ಬೆಂಗಳೂರಿನ ಸಂತೋಷ್ ಎನ್ನುವ ಬಿಲ್ಡರ್ ಮನೆ ಮೇಲೆ ಐಟಿ ರೈಡ್ ಮಾಡಿದಾಗ 45 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗಿದೆ. ಅಂಬಿಕಾಪತಿ ಮನೆಯಲ್ಲಿ ಕಂಟ್ರಾಕ್ಟರ್ಗಳಿಂದ ಸಂಗ್ರಹಿಸಿದ 42 ಕೋಟಿ ಹಣ ಸಿಕ್ಕಿದೆ. ಅದರೂ ನಾವು ಭ್ರಷ್ಟಚಾರದಲ್ಲಿ ತೊಡಗಿಲ್ಲ ಏನಾದರೂ ಸಾಕ್ಷಿ ಇದ್ರೆ ಕೊಡಿ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕಾ‘‘ ಎಂದು ರವಿಕುಮಾರ್ ತಿರುಗೇಟು ನೀಡಿದರು.