ಕರ್ನಾಟಕ

karnataka

By

Published : Dec 3, 2019, 7:23 PM IST

ETV Bharat / state

ಅಂಗನವಾಡಿ ಕೇಂದ್ರದಲ್ಲೇ ಎಲ್​ಕೆಜಿ, ಯುಕೆಜಿ ಪ್ರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ..

ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ವಿರೋಧಿಸಿ ಹಾಗೂ ಕಾರ್ಯಕರ್ತೆಯರ ಕನಿಷ್ಠ ವೇತನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

State-wide strike by Anganwadi workers on December 10
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ದಾವಣಗೆರೆ:ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ವತಿಯಿಂದ ಪ್ರತಿಭಟನಾ ಜಾಥಾ ಮೂಲಕ ಎಚ್ಚರಿಕೆ ನೀಡಲಾಯಿತು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ..

ನಗರದ ಜಯದೇವ ಸರ್ಕಲ್​ನಿಂದ ಪ್ರಾರಂಭವಾದ ಜಾಥಾದಲ್ಲಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿ ವಿರುದ್ಧ ಘೋಷಣೆ ಕೂಗಲಾಯ್ತು. ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕ ಸಹಕಾರ ನೀಡದೇ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕದೇ ಕೇಂದ್ರ ಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಧಿಕ್ಕಾರ ಕೂಗಿದರು.

ಡಿಸೆಂಬರ್ 10ರಂದು ಅನಿರ್ದಿಷ್ಟಾವಧಿ ಮುಷ್ಕರ: ಕನಿಷ್ಠ ವೇತನ, ಇತರೆ ಸೌಲಭ್ಯಗಳಿಗೆ ಆಗ್ರಹಿಸಿ ಡಿಸೆಂಬರ್ 10ರಂದು ಅಂಗನವಾಡಿ ನೌಕರರು ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಕಮಲಮ್ಮ ತಿಳಿಸಿದರು.

ABOUT THE AUTHOR

...view details