ದಾವಣಗೆರೆ:ಕ್ಷುಲ್ಲಕ ಕಾರಣಕ್ಕೆ 2 ಸಮುದಾಯಗಳ ನಡುವೆ ಗಲಾಟೆ ಸಂಭವಿಸಿದ ಪರಿಣಾಮ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಗಲಾಟೆಯಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಗಲಾಟೆ... ದಲಿತರ ಮನೆಗಳ ಮೇಲೆ ಕಲ್ಲು ತೂರಾಟ - undefined
ಕ್ಷುಲ್ಲಕ ಕಾರಣಕ್ಕೆ 2 ಸಮುದಾಯಗಳ ನಡುವೆ ಗಲಾಟೆ ಸಂಭವಿಸಿದ ಪರಿಣಾಮ ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಸಂತೆಬೆನ್ನೂರು ಗ್ರಾಮದಲ್ಲಿ ನಿನ್ನೆ ಸಂಜೆಯಿಂದ ಆರಂಭವಾದ ಘರ್ಷಣೆ ಕೊನೆಯಲ್ಲಿ ಕಲ್ಲು ತೂರಾಟ ಹಂತಕ್ಕೆ ತಲುಪಿದೆ. ದಲಿತರು ಹಾಗೂ ಸವರ್ಣೀಯ ಯುವಕರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಕೆಲವರು ದಲಿತರ ಹಟ್ಟಿಗೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಸಂತೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.