ದಾವಣಗೆರೆ: ನಗರದ ದೇವರಾಜ್ ಅರಸ್ ಬಡಾವಣೆ ಎ ಬ್ಲಾಕ್ 8 ನೇ ಕ್ರಾಸ್ನಲ್ಲಿ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ದಾವಣಗೆರೆಯಲ್ಲಿ ಬೀದಿ ನಾಯಿಗಳ ಅಟ್ಟಹಾಸ... ಬಾಲಕಿಗೆ ಗಂಭೀರ ಗಾಯ - Devaraj Arus Extention A Block 8th Cross Davanagere
ಬೆಣ್ಣೆ ನಗರಿಯಲ್ಲಿ ಬೀದಿ ನಾಯಿಗಳು ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ 8 ವರ್ಷದ ಬಾಲಕಿ ತೀವ್ರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಿರಣ್ ಎಂಬುವರ ಪುತ್ರಿ ಖುಷಿ (8) ಬೆಳಗ್ಗೆ ಅಂಗಡಿಗೆ ವಸ್ತುಗಳನ್ನು ತರಲು ಹೋದ ಸಂದರ್ಭದಲ್ಲಿ ಐದಾರು ಬೀದಿ ನಾಯಿಗಳು ಬಾಲಕಿ ಮೇಲೆ ದಾಳಿ ಮಾಡಿವೆ. ಭುಜ ಮತ್ತು ಕೈ ಗೆ ಕಚ್ಚಿವೆ. ಸ್ಥಳೀಯರು ಬಾಲಕಿಯನ್ನು ರಕ್ಷಿಸಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ದೇವರಾಜ್ ಅರಸ್ ಬಡಾವಣೆಯಲ್ಲಿ ಬೀದಿನಾಯಿಗಳು ಮತ್ತು ಹಂದಿಗಳ ಉಪಟಳ ಹೆಚ್ಚಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿಲಾಗಿದೆ. ಆದರೂ ಸಹ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕೂಡಲೇ ಬೀದಿನಾಯಿಗಳು, ಹಂದಿಗಳನ್ನು ಹಿಡಿದು ಸ್ಥಳಾಂತರಿಸಿ ಎಂದು ಬಡಾವಣೆ ನಿವಾಸಿಗಳು ಆಗ್ರಹಿದ್ದಾರೆ.