ದಾವಣಗೆರೆ :ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಜಗತ್ತಿನಲ್ಲಿ ಸಮಸ್ಯೆ ಇಲ್ಲದವರು ಯಾರೂ ಇಲ್ಲ. ಆದ್ದರಿಂದ ಆತ್ಮಹತ್ಯೆಗೆ ಶರಣಾಗದೇ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ.. ಡಿಸಿ ಮಹಾಂತೇಶ ಬೀಳಗಿ
ಆತ್ಮಹತ್ಯೆಯು ಖಿನ್ನತೆ ಎಂಬ ಮಾನಸಿಕ ಕಾಯಿಲೆಯ ಲಕ್ಷಣವಾಗಿದೆ. ಕುಟುಂಬದೊಡನೆ ಬೆರೆಯುವುದು, ನಿತ್ಯ ಧ್ಯಾನ, ಪ್ರಾಣಾಯಾಮ, ವ್ಯಾಯಾಮಗಳ ಅಭ್ಯಾಸ ಮಾಡುವುದು ಹಾಗೂ ಮನೋರಂಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಇಂತಹ ಸಮಸ್ಯೆಗಳಿಂದ ದೂರವಿರಬಹುದು..
ಜಿಲ್ಲಾಧಿಕಾರಿ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ನಡೆದ 'ವಿಶ್ವ ಆತ್ಮಹತ್ಯೆ ತಡೆ ದಿನ' ಕುರಿತು ಕಾರ್ಯಾಗಾರದ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಜೆ ಜೆ ಎಂ ವೈದ್ಯಕೀಯ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಹಾಗೂ ಮನೋವೈದ್ಯ ಡಾ. ಸುದರ್ಶನ್ ಮಾತನಾಡಿ, ಆತ್ಮಹತ್ಯೆ ಎಂದರೆ ವ್ಯಕ್ತಿಯು ತನ್ನನ್ನು ತಾನೇ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿಕೊಳ್ಳುವುದಾಗಿದೆ.
ಆತ್ಮಹತ್ಯೆಯು ಖಿನ್ನತೆ ಎಂಬ ಮಾನಸಿಕ ಕಾಯಿಲೆಯ ಲಕ್ಷಣವಾಗಿದೆ. ಕುಟುಂಬದೊಡನೆ ಬೆರೆಯುವುದು, ನಿತ್ಯ ಧ್ಯಾನ, ಪ್ರಾಣಾಯಾಮ, ವ್ಯಾಯಾಮಗಳ ಅಭ್ಯಾಸ ಮಾಡುವುದು ಹಾಗೂ ಮನೋರಂಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಇಂತಹ ಸಮಸ್ಯೆಗಳಿಂದ ದೂರವಿರಬಹುದು. ಒಂದು ವೇಳೆ ಮಾನಸಿಕ ಸಮಸ್ಯೆಯಿಂದ ಹಿಂಸೆ ಅನುಭವಿಸುತ್ತಿದ್ದರೆ ಗುಣಮಟ್ಟದ ಚಿಕಿತ್ಸೆ ಅಥವಾ ಆಪ್ತ ಸಮಾಲೋಚನೆಯಿಂದ ಆತ್ಮಹತ್ಯೆ ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.