ಕರ್ನಾಟಕ

karnataka

ETV Bharat / state

ದಾವಣಗೆರೆ: ಪ್ರಮುಖ ರಸ್ತೆಗಳು ಖಾಲಿ, ಅವಶ್ಯಕ ವಸ್ತುಗಳಿಗೆ ಜನರ ಓಡಾಟ - ಸಂಡೇ ಕರ್ಫ್ಯೂ

ಸಂಡೇ ಲಾಕ್​ಡೌನ್​ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಜಯದೇವ ವೃತ್ತ, ಅಂಬೇಡ್ಕರ್ ಸರ್ಕಲ್, ಪಿ.ಬಿ.ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಭಣಗುಡುತ್ತಿವೆ.

Davanagere
ಸಂಡೇ ಕರ್ಫ್ಯೂ: ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ

By

Published : Jul 12, 2020, 11:16 AM IST

ದಾವಣಗೆರೆ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರೆ ನೀಡಿರುವ ಸಂಡೇ ಕರ್ಫ್ಯೂಗೆ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸಂಡೇ ಕರ್ಫ್ಯೂ: ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ
ಬೆಳಗ್ಗೆ ಎಪಿಎಂಸಿ‌, ತರಕಾರಿ ಮಾರುಕಟ್ಟೆಯಲ್ಲಿ ಜನರು ಸೇರಿದ್ದು ಬಿಟ್ಟರೆ, ಉಳಿದಂತೆ ಓಡಾಟ ವಿರಳವಾಗಿತ್ತು. ರಾಷ್ಟ್ರೀಯ ಹೆದ್ದಾರಿ ವಾಹನಗಳ ಓಡಾಟದಿಂದ ಗಿಜಿಗಿಡುತ್ತಿತ್ತು.‌ ಜಯದೇವ ವೃತ್ತ, ಅಂಬೇಡ್ಕರ್ ಸರ್ಕಲ್, ಪಿ. ಬಿ. ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ. ಅವಶ್ಯಕ ವಸ್ತುಗಳನ್ನು ಖರೀದಿಸಲು ಜನರು ಮನೆಯಿಂದ ಹೊರ ಬರುತ್ತಿದ್ದಾರೆ.
ಕಳೆದ ಎರಡು ದಿನಗಳಲ್ಲಿ 91 ಕೊರೊನಾ ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿರುವ ಕಾರಣ ಜನರು ಆತಂಕಕ್ಕೊಳಗಾಗಿದ್ದು, ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೊನ್ನಾಳಿ, ಹರಿಹರ, ಚನ್ನಗಿರಿ, ಜಗಳೂರು ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ABOUT THE AUTHOR

...view details