ದಾವಣಗೆರೆ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಸ್ಫೋಟ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ದಾವಣಗೆರೆ ಜಿಲ್ಲಾಡಳಿತ, ಸ್ಫೋಟಕಗಳನ್ನು ಸಂಗ್ರಹಿಸಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ಸ್ಫೋಟಕ ಸಂಗ್ರಹಿಸಿದ್ದ ಗೋದಾಮುಗಳ ಮೇಲೆ ಅಧಿಕಾರಿಗಳು ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ನೇತೃತ್ವದಲ್ಲಿ ಭೇಟಿ ನೀಡಿದ್ದಾರೆ. ತಾಲೂಕಿನ ಕಾಡಜ್ಜಿ, ಜಗಳೂರು ತಾಲೂಕಿನ ತಾಯಿಟೋಣಿ ಗ್ರಾಮದ ಬಳಿ ಇರುವ ಗೋದಾಮುಗಳಲ್ಲಿದ್ದ ಸ್ಫೋಟಕಗಳನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ.