ಕರ್ನಾಟಕ

karnataka

ETV Bharat / state

ದಾವಣಗೆರೆ: ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪಾಪಿ ಪತಿ - ದಾವಣಗೆರೆ ಕ್ರೈಂ ನ್ಯೂಸ್​

ಕುಡಿಯಲು ಹಣ ನೀಡಲಿಲ್ಲ ಎಂದು ಕೋ‍ಪಗೊಂಡ ಪತಿ, ಪತ್ನಿಯನ್ನು ಕೊಲೆಗೈದಿರುವ ಘಟನೆ ನಗರದ ವಿಜಯನಗರದಲ್ಲಿ ನಡೆದಿದೆ.

davanagere
ಮಹಿಳಾ ಠಾಣೆ

By

Published : Dec 28, 2019, 1:42 PM IST

ದಾವಣಗೆರೆ:ಕುಡಿಯಲು ಹಣ ನೀಡಲಿಲ್ಲ ಎಂದು ಕೋ‍ಪಗೊಂಡ ಪತಿ, ಪತ್ನಿಯನ್ನು ಕೊಲೆಗೈದಿರುವ ಘಟನೆ ನಗರದ ವಿಜಯನಗರದಲ್ಲಿ ನಡೆದಿದೆ.

ವಿಜಯನಗರ ಬಡಾವಣೆಯ ಉಷಾ (38) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಜಯಪ್ಪ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಉಷಾ ಹಾಗು ಜಯಪ್ಪ ಎರಡು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಪ್ರತಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಪತ್ನಿಯ ಶೀಲದ ಬಗ್ಗೆಯೂ ಸಂಶಯ ಪಡುತ್ತಿದ್ದ ಎಂಬ ವಿಚಾರ ಗೊತ್ತಾಗಿದೆ.

ಇನ್ನು ಉಷಾ ದುಡಿದು ಮಕ್ಕಳನ್ನು ಸಾಕುತ್ತಿದ್ದರು. ಕಳೆದ ರಾತ್ರಿ ಕುಡಿದು ಬಂದ ಜಯಪ್ಪ ಪತ್ನಿ ಉಷಾ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಆಕೆ ಪ್ರಜ್ಞೆ ತಪ್ಪಿ ನೆಲಕ್ಕೆ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾರೆ.

ಜಿಲ್ಲೆಯ ಮಹಿಳಾ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ABOUT THE AUTHOR

...view details