ದಾವಣಗೆರೆ:ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಎಂಟು ಜನರ ತಂಡ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕಮಪುರ ಗ್ರಾಮದಲ್ಲಿ ನಡೆದಿದೆ.
ಅಕ್ರಮ ಮರಳು ಸಾಗಾಣಿಕೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದವನಿಗೆ ಥಳಿತ - undefined
ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಎಂಟು ಜನರ ಯುವಕರ ತಂಡ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.
ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಶನಿದೇವ (32) ಹಲ್ಲೆಗೊಳಗಾದ ಯುವಕ ಎಂದು ಹೇಳಲಾಗ್ತಿದೆ. ಗ್ರಾಮದ ಹೊರ ವಲಯದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಶನಿದೇವ ಪೊಲೀಸರಿಗೆ ಮಾಹಿತಿ ನೀಡಿದ ಆರೋಪದ ಹಿನ್ನೆಲೆ ಗುರುಮೂರ್ತಿ ಸೇರಿ ಎಂಟು ಜನರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.
ನಾಲ್ವರು ಆರೋಪಿಗಳನ್ನು ಜಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಒಂದು ಟ್ರ್ಯಾಕ್ಟರ್ ಕೂಡ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.