ದಾವಣಗೆರೆ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಮತ್ತು ಕಲ್ಲಿದ್ದಲು ಅಭಾವ ಉಂಟಾಗುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗುತ್ತೆ ಅನ್ನೋದು ಊಹಾಪೋಹ: ಸಚಿವ ಸುನಿಲ್ ಕುಮಾರ್ ನರದ ಜಿಎಂಐಟಿ ಗೆಸ್ಟ್ ಹೌಸ್ ಬಳಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗದಂತೆ ಎಲ್ಲ ರೀತಿಯ ಎಚ್ಚರಿಕೆವಹಿಸಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗುತ್ತೆ ಅನ್ನೋದು ಊಹಾಪೋಹ. ರಾಯಚೂರು-ಬಳ್ಳಾರಿ ಘಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲ. ಕೇಂದ್ರ ಸರ್ಕಾರ 8 ರೇಕ್ಸ್ ಕಲ್ಲಿದ್ದಲು ಕಳುಹಿಸಿ ಕೊಟ್ಟಿದೆ. ನವೆಂಬರ್ ಅಂತ್ಯದಲ್ಲಿ ಇನ್ನೆರಡು ರೇಕ್ಸ್ ಹೆಚ್ಚು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಸುನೀಲ್ ಕುಮಾರ್ ತಿಳಿಸಿದರು.
ಉಪ ಚುನಾವಣೆಯಲ್ಲಿ ನಾವೇ ಗೆಲ್ಲೋದು
ಇನ್ನು ರಾಜ್ಯದಲ್ಲಿ ಘೋಷಣೆಯಾಗಿರುವ ಬೈ ಎಲೆಕ್ಷನ್ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಉಪಚುನಾವಣೆ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಚುನಾವಣೆಯ ಫಲಿತಾಂಶದ ಆಧಾರವಿಟ್ಟುಕೊಂಟು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಜಯ ಸಾಧಿಸುತ್ತೇವೆ ಎಂದರು. ಹಾನಗಲ್, ಸಿಂದಗಿ ಉಪ ಚುನಾವಣೆಗಳು 2023ರ ಚುನಾವಣೆಯ ದಿಕ್ಸೂಚಿ ಆಗಲಿವೆ ಎಂದಿದ್ದಾರೆ.
ಇದನ್ನೂ ಓದಿ: ಕಲ್ಲಿದ್ದಲು ಕೊರತೆ: ಆರ್ಟಿಪಿಎಸ್ನ ಐದು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ