ದಾವಣಗೆರೆ: ಬಿಜೆಪಿ ಸಚಿವ ಕೆ.ಎಸ್.ಈಶ್ವರಪ್ಪ ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಎಸ್.ಈಶ್ವರಪ್ಪಗೆ ಮಾನಸಿಕ ಚಿಕಿತ್ಸೆ ಅಗತ್ಯವಿದೆ: ತಿಪ್ಪಣ್ಣ - ದಾವಣಗೆರೆಯಲ್ಲಿ ಮಾನವ ಹಕ್ಕುಗಳ ಸಮಿತಿ ಪತ್ರಿಕಾಗೋಷ್ಠಿ
ಬಿಜೆಪಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಮಾನಸಿಕ ಚಿಕಿತ್ಸೆಯ ಅವಶ್ಯಕತೆ ಇದೆ. ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪಣ್ಣ ಹೇಳಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪಣ್ಣ
ಮುಸ್ಲಿಮರು ಕನಿಷ್ಟ 10 ವರ್ಷ ಪಕ್ಷದ ಕಚೇರಿಯಲ್ಲಿ ಕಸಗುಡಿಸಿದರೆ ಮಾತ್ರ ಟಿಕೆಟ್ ನೀಡುತ್ತೇವೆ ಎಂದಿದ್ದ ಕೆ.ಎಸ್.ಈಶ್ವರಪ್ಪನವರು, ಈಗ ಸಿಎಂ ಕಾರ್ಯದರ್ಶಿಯವರು ಶಿವಾಜಿ ನಗರದಲ್ಲಿ ಬಿಜೆಪಿ ಬೆಂಬಲಿಸಿದರೆ ರೋಷನ್ ಬೇಗ್ ಅವರನ್ನು ಎಂಎಲ್ಸಿ ಮಾಡುತ್ತೇವೆ, ಸಚಿವ ಸ್ಥಾನ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದರು.
ಬಿಜೆಪಿಯ ಅವಕಾಶವಾದಿ ರಾಜಕೀಯಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದರು.