ಕರ್ನಾಟಕ

karnataka

ETV Bharat / state

ಚನ್ನಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವು - Road accident

ಚನ್ನಗಿರಿಯ ರೊಪ್ಪದಹಟ್ಟಿ ಕ್ರಾಸ್​ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಬೈಕ್​ನಲ್ಲಿ ಗ್ರಾಮಕ್ಕೆ ಮರಳುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಮೂವರು ಸಾವನಪ್ಪಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Three killed in a bike accident near Channagiri
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವು

By

Published : Jun 10, 2020, 11:35 PM IST

ದಾವಣಗೆರೆ: ಅಪರಿಚಿತ ವಾಹನ ಬೈಕ್​​​ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ಕ್ರಾಸ್ ಬಳಿ ನಡೆದಿದೆ.

ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ನಿವಾಸಿಗಳಾದ ಇದಾಯತ್ ಉಲ್ಲಾ (21), ರಂಗಪ್ಪ (45) ಹಾಗೂ ಮಹಮದ್ ಸೈಫುಲ್ಲಾ (45) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂವರೂ ಗಾರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಚನ್ನಗಿರಿಯಿಂದ ರೊಪ್ಪದಹಟ್ಟಿ ಗ್ರಾಮಕ್ಕೆ ಮರಳುತ್ತಿದ್ದಾಗ ಅಪರಿಚಿತ ವಾಹನವು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details