ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೆ ಮೂವರು ಬಲಿಯಾಗಿದ್ದು, ಸಾವಿನ ಸಂಖ್ಯೆ 27ಕ್ಕೇರಿದೆ. ಶನಿವಾರ 56 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 745ಕ್ಕೇರಿದೆ.
ದಾವಣಗೆರೆಯಲ್ಲಿ ಕೊರೊನಾಕ್ಕೆ ಮೂವರು ಬಲಿ: ಸಾವಿನ ಸಂಖ್ಯೆ 27ಕ್ಕೇರಿಕೆ - three corona patients dead in davanagere
ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೆ ಮೂವರು ಬಲಿಯಾಗಿದ್ದು, ಸಾವಿನ ಸಂಖ್ಯೆ 27ಕ್ಕೇರಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 560 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದಾವಣಗೆರೆಯಲ್ಲಿ ಕೊರೊನಾಕ್ಕೆ ಮೂವರು ಬಲಿ
ದಾವಣಗೆರೆಯ ಜಾಲಿನಗರದ 35 ವರ್ಷದ ಮಹಿಳೆ, ಇಮಾಮ್ ನಗರದ 45 ವರ್ಷದ ಮಹಿಳೆ ಹಾಗೂ 48 ವರ್ಷದ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಮಹಿಳೆ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.
ದಾವಣಗೆರೆಯಲ್ಲಿ 41, ಹರಿಹರ 2, ಜಗಳೂರು 5, ಚನ್ನಗಿರಿ 1, ಹೊನ್ನಾಳಿ 2, ಹೊರ ರಾಜ್ಯದಿಂದ ದಾವಣಗೆರೆಗೆ ಬಂದಿದ್ದ ಐವರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಇಂದು 16 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 560 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 158 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.