ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಶೇಖರಪ್ಪನಗರದಲ್ಲಿ ನಡೆದಿದೆ. ಮೃತರನ್ನು ಕೃಷ್ಣ ನಾಯ್ಕ್(44), ಸುಮಾ (32), ಧ್ರುವ (7) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಆರ್ಎಂಸಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳಿಂದ ಸುಮಾ ಅನಾರೋಗ್ಯಕ್ಕೆ ತುತ್ತಾಗಿದ್ದಳಂತೆ. ಲಾರಿ ಚಾಲಕನಾಗಿದ್ದ ಕೃಷ್ಣ ನಾಯ್ಕ್, ಪತ್ನಿ ಗುಣಮುಖಳಾಗುವುದಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದನಂತೆ. ಆದರೂ ಆಕೆ ಚೇತರಿಸಿಕೊಂಡಿರಲಿಲ್ಲ. ಇದರಿಂದ ಮನನೊಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿದೆ.