ದಾವಣಗೆರೆ: ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ ಸೇವನೆ ಹಾಗೂ ಉಗಿಯುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ತಂಬಾಕು, ಪಾನ್ ಮಸಾಲ ಸೇವನೆ ನಿಷೇಧ: ಡಿಸಿ - DC mahantesh r bilagi news
ದಾವಣಗೆರೆಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ್ ಉತ್ಪನ್ನಗಳನ್ನು ಜಗಿದು ಉಗಿಯುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ.
Davanagere dc
ತಂಬಾಕು ಹಾಗೂ ಪಾನ್ ಮಸಾಲ್ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್-19 ಸೋಂಕು ಇತರರಿಗೆ ಹರಡುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ಈ ಆದೇಶ ಜಾರಿಗೊಳಿಸಿದ್ದು, ಈ ಆದೇಶವನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.