ಕರ್ನಾಟಕ

karnataka

ETV Bharat / state

ಮಹಾನಗರ ಪಾಲಿಕೆ ಮತ ಎಣಿಕೆಗೆ ಸಕಲ ಸಿದ್ಧತೆ: ಅಭ್ಯರ್ಥಿಗಳ ಎದೆಯಲ್ಲಿ ಢವ..ಢವ...! - davangere vote counting news

ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ

By

Published : Nov 13, 2019, 8:04 PM IST

ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ

ನಗರದ ಅಗ್ನಿಶಾಮಕ ದಳ ಕಚೇರಿ ಸಮೀಪದಲ್ಲಿರುವ ಡಿಆರ್​ಆರ್​​​ ಪ್ರೌಢಶಾಲೆಯ ಸ್ಟ್ರಾಂಗ್ ರೂಂನಲ್ಲಿ, 45 ವಾರ್ಡ್ ಗಳ 377 ಬೂತ್ ಗಳ ಇವಿಎಂಗಳನ್ನು ಇಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ 208 ಅಭ್ಯರ್ಥಿಗಳ ಹಣೆಬರಹ ಈ ಮತಯಂತ್ರಗಳಲ್ಲಿ ಅಡಕವಾಗಿದೆ. ಈ ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶೇಕಡಾ 56.1 ಮತದಾನವಾಗಿತ್ತು, ಅಭ್ಯರ್ಥಿಗಳು ನಾಳೆ ಬೆಣ್ಣೆನಗರಿ ಮಂದಿಯ ಉತ್ತರಕ್ಕೆ ಕಾತರದಿಂದ ಕಾಯುತ್ತಿದ್ದಾರೆ.

ನಾಳೆ ನಡೆಯುವ ಮತ ಎಣಿಕೆ ಕಾರ್ಯಕ್ಕೆ ಒಟ್ಟು 45 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಚುನಾವಣಾಧಿಕಾರಿಗೆ 5 ಟೇಬಲ್​ನಂತೆ 63 ಮೇಲ್ವಿಚಾರಕರು, 63 ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದ್ದು, ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ, ಬಳಿಕ ವಿದ್ಯುನ್ಮಾನ ಯಂತ್ರಗಳ ಎಣಿಕೆ ನಡೆಯಲಿದೆ, ಅಭ್ಯರ್ಥಿ ಹಾಗೂ ಒಬ್ಬರಿಗೆ ಮಾತ್ರ ಮತಎಣಿಕೆ ಕೇಂದ್ರದೊಳಗೆ ಬರುವಂತೆ ಅವಕಾಶ ನೀಡಲಾಗಿದೆ.

ಇನ್ನು ಪೊಲೀಸ್ ಇಲಾಖೆಯು ಸಹ ಮಾರ್ಗದಲ್ಲಿ ಬದಲಾವಣೆ ಮಾಡಿದೆ. ವಾಹನಗಳ ಪಾರ್ಕಿಂಗ್ ಗೆ ಸೂಕ್ತ ಜಾಗದ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ABOUT THE AUTHOR

...view details