ದಾವಣಗೆರೆ: ಅಡಿಕೆ ಬೊಂಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ ಪಲ್ಟಿ.. ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ - ಟ್ರ್ಯಾಕ್ಟರ್ ಪಲ್ಟಿ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸಮೀಪದ ಸಿದ್ದನಮಠ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಮಂಜುನಾಥ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ ಪಲ್ಟಿ
ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸಮೀಪದ ಸಿದ್ದನಮಠ ಗ್ರಾಮದ ಬಳಿ ಘಟನೆ ನಡೆದಿದೆ. ಚಾಲಕ ಮಂಜುನಾಥ (26) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.