ಕರ್ನಾಟಕ

karnataka

ETV Bharat / state

ಬೆಂಗಳೂರಿಗೆ ಹೋಗುವಾಗ ಡಿವೈಡರ್​​ಗೆ ಕಾರು ಡಿಕ್ಕಿ: 6 ವರ್ಷದ ಮಗು, ಮಹಿಳೆ ಸಾವು

ಧಾರವಾಡದಿಂದ ಬೆಂಗಳೂರಿಗೆ ತೆರಳುತ್ತಿರುವಾಗ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮಗು ಸೇರಿ ಇಬ್ಬರು ಸಾವು
ಮಗು ಸೇರಿ ಇಬ್ಬರು ಸಾವು

By

Published : Aug 31, 2021, 9:46 AM IST

ದಾವಣಗೆರೆ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮಗು ಸೇರಿ ಇಬ್ಬರು ಸಾವಿಗೀಡಾದ ದಾರುಣ ಘಟನೆ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳಗಿನ ಜಾವ ಜರುಗಿದೆ.

ಘಟನಾ ಸ್ಥಳದ ಚಿತ್ರಣ

ವೀಣಾ(32) ವೈಷ್ಣವಿ(6) ಮೃತ ದುರ್ದೈವಿಗಳು. ಮೃತರನ್ನು ಧಾರವಾಡದ ಜಯನಗರದ ನಿವಾಸಿಗಳೆಂದು ಗುರುತಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕಾರು ಭೀಕರ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ದುರ್ಮರಣ

ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಪರಿಣಾಮ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details