ದಾವಣಗೆರೆ: ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ.
ಹರಪ್ಪನಹಳ್ಳಿ ಬಳಿ ಸಿಡಿಲಿಗೆ ಇಬ್ಬರು ಯುವಕರು ಬಲಿ... ಮತ್ತಿಬ್ಬರು ಗಂಭೀರ - thunderbolt
ಹರಪ್ಪನಹಳ್ಳಿ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಬೆಳಗಿನ ಜಾವ ಉದ್ಯೋಗ ಖಾತ್ರಿ ಕೂಲಿಕೆಲಸಕ್ಕೆಂದು ಹೋಗಿದ್ದಾಗ ಸಿಡಿಲು ಬಡಿದು ಈ ಘಟನೆ ನಡೆದಿದೆ. ಇದೇ ವೇಳೆ ಇನ್ನಿಬ್ಬರು ಗಾಯಗೊಂಡಿದ್ದಾರೆ.
ಸಿಡಿಲು ಬಡಿದು ಇಬ್ಬರು ಸಾವು, ಮತ್ತಿಬ್ಬರು ಗಂಭೀರ
ಕಿರಣ (17), ಅರವಿಂದ(21) ಸಾವನ್ನಪ್ಪಿದವರು. ಉಮೇಶ (22), ಈರಪ್ಪ (25) ಗಂಭೀರ ಗಾಯಗೊಂಡಿದ್ದು, ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಬೆಳಗಿನ ಜಾವ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆಂದು ಹೋಗಿದ್ದಾಗ ಈ ಘಟನೆ ಜರುಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ನಡೆದರೂ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
TAGGED:
thunderbolt