ಕರ್ನಾಟಕ

karnataka

ETV Bharat / state

ಇ-ಸ್ವತ್ತು ಮಾಡಿಕೊಡಲು ಲಂಚ: ಪಿಡಿಒ, ಡೇಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ - PDO traped

10,000 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್‌ ಮಾಡಿದ್ದಾರೆ.

Lokayukta attack
Lokayukta attack

By ETV Bharat Karnataka Team

Published : Oct 27, 2023, 6:38 PM IST

ದಾವಣಗೆರೆ: ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಪಿಡಿಒ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಚ್ಚೇನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ನಂದಿ ಅಂಗೇಶ ಸಾರಂಗಮಠ ಹಾಗೂ ಡಾಟಾ ಎಂಟ್ರಿ ಆಪರೇಟರ್ ಅಜ್ಜಯ್ಯ ಆರ್. ಎಂಬಿಬ್ಬರು ಭ್ರಷ್ಟ ಬಂಧಿತ ಅಧಿಕಾರಿಗಳಾಗಿದ್ದಾರೆ.

ಬಸವನಗೌಡ ಎಂಬವರು ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿರುವ ಮನೆ ಖಾತೆ ನಂ. 23ಕ್ಕೆ ಇ-ಸ್ವತ್ತು ಮಾಡಿಕೊಡಲು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಇ-ಸ್ವತ್ತು ಮಾಡಿಕೊಡಲು ಪಿಡಿಒ 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅರ್ಜಿದಾರರು ಅ. 21ರಂದು ಲೋಕಾಯುಕ್ತ ಪೊಲೀಸ್ ಠಾಣೆ ದೂರು ನೀಡಿದ್ದರು.‌

ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು ಇಂದು ಬಸವನಗೌಡ ಅವರಿಂದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಪಡೆಯುವಾಗ ಟ್ರ್ಯಾಪ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ:ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್​ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್​ಸ್ಟೇಬಲ್​

ಬಿ ರಿಪೋರ್ಟ್​ಗೆ ಲಂಚ: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್​ ಸಲ್ಲಿಸಲು 50 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟು, ಐದು ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ಪೊಲೀಸ್​ ಹೆಡ್​ ಕಾನ್​ಸ್ಟೇಬಲ್‌ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಾಲ್ಕು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ನಡೆದಿತ್ತು. ರಾಜಾಜಿನಗರ ಠಾಣೆಯ ಹೆಡ್​ ಕಾನ್​ಸ್ಟೇಬಲ್​​ ಆಂಜನೇಯ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದವರು. ಪ್ರಕರಣದಲ್ಲಿ ಸಬ್​ ಇನ್​ಸ್ಪೆಕ್ಟರ್​ ಮಾರುತಿ ಮತ್ತು ಇನ್​ಸ್ಪೆಕ್ಟರ್ ಲಕ್ಷ್ಮಣ್ ಗೌಡ ಕೂಡ ಆರೋಪಿಗಳಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಪಿಎಸ್ಐ ಮಾರುತಿ, ಇನ್​ಸ್ಪೆಕ್ಟರ್ ಲಕ್ಷ್ಮಣ್ ಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದರು.

ABOUT THE AUTHOR

...view details