ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್ಪಿಗೆ ವರ್ಗಾವಣೆಗೊಂಡ ಡಾ. ಅರುಣ್ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
ಇತ್ತೀಚಿಗೆ ಉಮಾ ಪ್ರಶಾಂತ್ ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್ಪಿ ಡಾ.ಅರುಣ್ ಅವರನ್ನು ಕಲಬುರಗಿ ಪೊಲೀಸ್ ತರಬೇತಿ ಶಾಲೆಗೆ ವರ್ಗಾವಣೆ ಮಾಡಲಾಗಿದೆ.