ದಾವಣಗೆರೆ:ನಮ್ಮ ಮಾತಿಗೆ ಬೆಲೆ ಕೊಟ್ಟು ಶಾಸಕ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ ಎಂದು ಹರಿಹರದ ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
ನಮ್ಮ ಮಾತಿಗೆ ಬೆಲೆ ಕೊಟ್ಟು ನಿರಾಣಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ: ವಚನಾನಂದ ಶ್ರೀ - ministerial position to Murugesh Nirani
ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯ ಕೇಂದ್ರ ವರಿಷ್ಠರು ಹಾಗೂ ರಾಜ್ಯ ನಾಯಕರು ಪಂಚಮಸಾಲಿ ಸಮಾಜಕ್ಕೆ ಸಂಪುಟದಲ್ಲಿ ಆದ್ಯತೆ ನೀಡಿರುವುದು ಸಂತಸ ತಂದಿದೆ ಎಂದು ವಚನಾನಂದ ಶ್ರೀಗಳು ಹೇಳಿದ್ದಾರೆ.
ನಮ್ಮ ಮಾತಿಗೆ ಬೆಲೆ ಕೊಟ್ಟು ನಿರಾಣಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ: ವಚನಾನಂದ ಶ್ರೀ
ಹರಿಹರದ ಪಂಚಮಸಾಲಿ ಪೀಠದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯ ಕೇಂದ್ರ ವರಿಷ್ಠರು, ರಾಜ್ಯ ನಾಯಕರು ಪಂಚಮಸಾಲಿ ಸಮಾಜಕ್ಕೆ ಸಂಪುಟದಲ್ಲಿ ಆದ್ಯತೆ ನೀಡಿರುವುದು ಸಂತಸ ತಂದಿದೆ ಎಂದರು.
ಹರಜಾತ್ರೆ ಒತ್ತಡದ ಮಧ್ಯೆಯೂ ಮುರುಗೇಶ್ ನಿರಾಣಿ ಅವರಿಗೆ ಕರೆ ಮಾಡಿದ ವಚನಾನಂದ ಸ್ವಾಮೀಜಿ, ನಿರಾಣಿಯವರಿಗೆ ಶುಭ ಕೋರಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಉತ್ತಮ ಕೆಲಸ ಮಾಡಿಕೊಂಡು ಹೋಗುವಂತೆ ತಿಳಿಸಿರುವುದಾಗಿ ಹೇಳಿದರು.