ದಾವಣಗೆರೆ :ನಗರದ ಕುವೆಂಪು ಕನ್ನಡ ಭವನದಲ್ಲಿ ಇಂದು ಜಿಲ್ಲಾ ವನಿತಾ ಸಾಹಿತ್ಯ ವೇದಿಕೆ ರಜತ ಮಹೋತ್ಸವ ಹಿನ್ನಲೆಯಲ್ಲಿ 'ವನಿತಾ ಸಾಹಿತ್ಯ ಸಿರಿ' ಸಂಚಿಕೆ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವನಿತಾ ಸಾಹಿತ್ಯ ವೇದಿಕೆ ಅಧ್ಯಕ್ಷೆ ಮಲ್ಲಮ್ಮ ನಾಗರಾಜ್, ನಮ್ಮ ವೇದಿಕೆ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ, ರಜತ ಮಹೋತ್ಸವ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆ ಗೌರವಾಧ್ಯಕ್ಷೆ ಡಾ. ನಾಗಮ್ಮ ಸಿ.ಕೇಶವಮೂರ್ತಿ ವಹಿಸಲಿದ್ದು, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಸ್.ವಿ. ಚಂದ್ರಕಲಾ ಅವರು 'ವನಿತಾ ಸಾಹಿತ್ಯ ಸಿರಿ' ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.