ದಾವಣಗೆರೆ: ಇಂದು ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಅನುವು ಮಾಡಿಕೊಡುವಂತೆ ವೆಂಕಟೇಶ್ವರ ದೇವಸ್ಥಾನದ ಬಳಿ ಭಕ್ತರು ಗಲಾಟೆ ನಡೆಸಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿರುವ ವೆಂಕಟೇಶ್ವರ ದೇವಾಲಯದಲ್ಲಿ ಬೆಳಗಿನ ಜಾವದಿಂದ ಮಧ್ಯಾಹ್ನದ ತನಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆ ಮಧ್ಯಾಹ್ನದ ಬಳಿಕ ಅವಕಾಶ ಕಲ್ಪಿಸದೆ ಇರುವುದರಿಂದ ಭಕ್ತರು ಗಲಾಟೆ ಮಾಡಿದ್ದಾರೆ. ದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆ ಜಿಲ್ಲಾಡಳಿತ ಹಾಗೂ ದೇವಸ್ಥಾನ ಕಮಿಟಿ ವಿರುದ್ಧ ತಿಮ್ಮಪ್ಪನ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.