ದಾವಣಗೆರೆ:ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಂಗಳೂರು ಗಲಭೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ
ಮೂರು ದಿನಗಳ ಹಿಂದೆ ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಖಂಡಿಸಿ ದಾವಣೆಗೆರೆ ನಗರದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೇದಿಕೆಯ ಕಾರ್ಯಕರ್ತರು, ಕೆಲ ಸಂಘಟನೆಗಳ ವಿರುದ್ಧ ಘೋಷಣೆ ಕೂಗದರು. ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸದಸ್ಯರ ಕೈವಾಡ ಕಂಡು ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಈ ಗಲಭೆಗೆ ಕಾರಣವಾದ ಸಂಘಟನೆಗಳನ್ನು ಸಿಎಂ ಯಡಿಯೂರಪ್ಪ ನಿಷೇಧಿಸಬೇಕು. ಗಲಭೆಯಿಂದ ಹಾನಿಗೊಳಗಾದ ಸಾರ್ವಜನಿಕ ಆಸ್ತಿ ಮೊತ್ತವನ್ನು ಆರೋಪಿಗಳಿಂದಲೇ ಭರಿಸಬೇಕು. ಗಲಭೆ ಮಾಡಿದವರಿಗೆ ಹಣ ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಜಮೀರ್ ಅಹ್ಮದ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.