ದಾವಣಗೆರೆ: ಲಾಕ್‍ಡೌನ್ ಮೇ 3ರವರೆಗೆ ವಿಸ್ತರಿಸಿದ್ದು, ಲಾಕ್‍ಡೌನ್ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಎಚ್ಚರಿಕೆ ನೀಡಿದ್ದಾರೆ.
ಲಾಕ್‍ಡೌನ್ ಆದೇಶ ಉಲ್ಲಂಘಿಸಿದ್ರೆ ಕಠಿಣ ಕ್ರಮ: ದಾವಣಗೆರೆ ಜಿಲ್ಲಾಧಿಕಾರಿ ಎಚ್ಚರಿಕೆ
ಲಾಕ್‍ಡೌನ್ ಉಲ್ಲಂಘನೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಕಾನೂನು ಕ್ರಮ ಜರುಗಿಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್-19 ನಿಯಂತ್ರಣ ಹಿನ್ನೆಲೆ ಘೊಷಿಸಲಾಗಿರುವ ಲಾಕ್‍ಡೌನ್ ಕಟ್ಟುನಿಟ್ಟಾಗಿ ಅನುಸರಿಸಲು ಕೇಂದ್ರ ಸರ್ಕಾರ ಸೂಚಿಸಿದ್ದು, ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಕಾನೂನು ಕ್ರಮ ಜರುಗಿಸಲಾಗುವುದು. ಧಾರ್ಮಿಕ ಸಭೆ-ಸಮಾರಂಭಗಳನ್ನ ನಿರ್ಬಂಧಿಸಿ, ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲ್ಲದೇ,ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ದಾವಣಗೆರೆಗೆ ಆಗಮಿಸುವ ವ್ಯಕ್ತಿಗಳನ್ನ ಜಿಲ್ಲೆಯಲ್ಲಿರುವ ವಲಸಿಗರ ಶಿಬಿರಗಳಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಿ ನಂತರ ಜಿಲ್ಲೆಯಲ್ಲಿ ಸಂಚರಿಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.