ಕರ್ನಾಟಕ

karnataka

ETV Bharat / state

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಾಸಕ ರಾಮಪ್ಪ ವಿರುದ್ಧ ಪ್ರಕರಣ ದಾಖಲು - ದಾವಣಗೆರೆ ಸುದ್ದಿ 2020

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ಸಂದರ್ಭದಲ್ಲಿ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಹರಿಹರ ಶಾಸಕ ಎಸ್.ರಾಮಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರ ಶಾಸಕ ಎಸ್. ರಾಮಪ್ಪ
ಹರಿಹರ ಶಾಸಕ ಎಸ್. ರಾಮಪ್ಪ

By

Published : Oct 30, 2020, 10:02 AM IST

ದಾವಣಗೆರೆ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ವೇಳೆ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಹರಿಹರ ಶಾಸಕ ಎಸ್.ರಾಮಪ್ಪ ವಿರುದ್ಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರಿಹರ ತಾಲೂಕಿನ ಮಲೇಬೆನ್ನೂರಿನ ಜಿಗಳಿ ರಸ್ತೆಯ ಕಾಲೇಜಿನ ಮತಗಟ್ಟೆ ಸಂಖ್ಯೆ 4 ಹಾಗೂ 5ಕ್ಕೆ ಅಕ್ರಮ ಪ್ರವೇಶ ಮಾಡಿದ ಸಂಬಂಧ ಮತಗಟ್ಟೆ ಸೆಕ್ಟರ್ ಅಧಿಕಾರಿ ಹೆಚ್.ಟಿ.ನೌಷದ್ ಮಲೇಬೆನ್ನೂರು ಪೊಲೀಸರಿಗೆ ದೂರು ನೀಡಿದ್ದರು. ಮತದಾನ ನಡೆಯುತ್ತಿದೆ. ಇಲ್ಲಿ ಯಾರಿಗೂ ಪ್ರವೇಶ ಇಲ್ಲ ಎಂದರೂ ಶಾಸಕರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಈ ಮೂಲಕ ಚುನಾವಣೆಯ ನೀತಿ‌ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

ಮತಗಟ್ಟೆಗಳ ಅಧಿಕಾರಿಗಳು‌ ನೀಡಿರುವ ವರದಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದ್ದು, ಶಾಸಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ‌ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

ABOUT THE AUTHOR

...view details