ದಾವಣಗೆರೆ :ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ನಮ್ಮ ಮುಖಂಡರು, ಶಾಸಕರು, ಪಕ್ಷದ ಕಾರ್ಯಕರ್ತರು ಉತ್ತಮವಾಗಿ ಪ್ರಚಾರ ಕೈಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಇವತ್ತು ಆಲಮಟ್ಟಿಗೆ ಹೋಗಿ ಉಳಿದು, ನಾಳೆಯಿಂದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ಕ್ಷೇತ್ರದಲ್ಲೂ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ಎಲ್ಲರ ಪರಿಶ್ರಮ, ಮೋದಿಯವರ ಅಲೆ ನಮ್ಮ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜನ ಮನ್ನಣೆ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದ್ರು.