ಕರ್ನಾಟಕ

karnataka

ETV Bharat / state

ಮಾಸ್ಕ್, ಸ್ಯಾನಿಟೈಸರ್​ಗೆ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕ್ರಮ: ಡಿಸಿ ಖಡಕ್ ವಾರ್ನಿಂಗ್ - mask sanitizer latest news

ಕೊರೊನಾ ಭೀತಿ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್​ಗಳ ಬೇಡಿಕೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಅವುಗಳ ಕೃತಕ ಅಭಾವ ಸೃಷ್ಟಿಸಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

will take action if the mask, sanitizer gets more than the prescribed rate: DC
ಮಾಸ್ಕ್, ಸ್ಯಾನಿಟೈಸರ್​ಗೆ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕ್ರಮ: ಡಿಸಿ ಖಡಕ್ ವಾರ್ನಿಂಗ್

By

Published : Mar 18, 2020, 7:39 AM IST

ದಾವಣಗೆರೆ: ಜಿಲ್ಲೆಯ ಮೆಡಿಕಲ್ ಶಾಪ್‍ಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್​ಗಳ ಕೃತಕ ಅಭಾವ ಸೃಷ್ಟಿಸಿ ದಾಸ್ತಾನು ಖಾಲಿಯಾಗಿದೆ ಎನ್ನುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

ಎಂ.ಆರ್.ಪಿ ಗಿಂತ ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಆಹಾರ ಇಲಾಖೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳನ್ನೊಳಗೊಂಡ ತಂಡವು ಸರ್ಕಾರದ ಆದೇಶದಂತೆ ಕಾರ್ಯಾಚರಿಸಲಿದೆ. ಕೋವಿಡ್ -19 ಸೋಂಕು ತಡೆಗಟ್ಟಲು ಬಳಸುವ ವೈಯಕ್ತಿಕ ಸುರಕ್ಷತಾ ಸಾಧನಗಳಾದ ಮಾಸ್ಕ್ ಮತ್ತು ಸ್ಯಾನಿಟೈಸರ್​ಗಳ ಕೃತಕ ಅಭಾವ ಉಂಟಾಗದಂತೆ ಹಾಗೂ ಎಂ.ಆರ್.ಪಿ ದರದಲ್ಲಿ ಎಲ್ಲವೂ ಲಭ್ಯವಾಗುವಂತೆ ಕ್ರಮ ವಹಿಸಲಿವೆ ಎಂದಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡಕ್ ವಾರ್ನಿಂಗ್

ನಿಯಮಗಳನ್ನು ಉಲ್ಲಂಘಿಸುವ ವ್ಯಾಪಾರಿಗಳ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1995 ಮತ್ತು ಪೊಟ್ಟಣ ಸಾಧನಗಳ ಕಾಯ್ದೆ 2009ರಡಿ ಆಹಾರ ಇಲಾಖೆ ಜಂಟಿ ನಿರ್ದೇಶಕರು, ದಾವಣಗೆರೆ ಉಪವಿಭಾಗದ ಎಸಿ, ಡಿಹೆಚ್‍ಓ, ಔಷಧ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಹಾಗೂ ಎಲ್ಲಾ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮುಂಜಾಗ್ರತೆಯಾಗಿ 2020ರ ಜೂನ್ 30 ರವರೆಗೂ ಅಗತ್ಯ ತಪಾಸಣೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details